Saturday, June 13, 2026
spot_imgspot_img
spot_imgspot_img

ಮಂಗಳೂರು : ಚಿಕಿತ್ಸೆಗೆಂದು ಕರೆದುಕೊಂಡು ಬಂದು ಮಹಿಳೆ ಮೇಲೆ ಅತ್ಯಾಚಾರ

- Advertisement -
- Advertisement -

ಮಂಗಳೂರು : ಚಿಕಿತ್ಸೆಗೆಂದು ಕರೆದುಕೊಂಡು ಬಂದು ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಘಟನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.

ಆರೋಪಿ ಕೇರಳ ಮೂಲದ ಸಜಿತ್ ಎಂಬಾತನು ಖಾಸಗಿ ಆಸ್ಪತ್ರೆ ಹಾಗೂ ಹೋಟೆಲ್‌ನಲ್ಲಿ ಕೃತ್ಯವೆಸಗಿದ್ದು, ಪೈಲ್ಸ್ ಗೆ ಚಿಕಿತ್ಸೆ ಕೊಡಿಸುವುದಾಗಿ ಮೊದಲು ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬಂದು ಅತ್ಯಾಚಾರ ಮಾಡಿದ್ದಾನೆ. ಬಳಿಕ ನಗರದ ಪ್ರತಿಷ್ಠಿತ ಹೋಟೆಲ್, ಖಾಸಗಿ ಆಸ್ಪತ್ರೆ ಸೇರಿ ಹಲವೆಡೆ ಫೋಟೋ ಇಟ್ಟುಕೊಂಡು ಬ್ಯಾಕ್‌ಮೇಲ್ ಮಾಡಿ ಕೃತ್ಯ ಎಸಗಿದ್ದಾನೆ ಎಂದು ವರದಿಯಾಗಿದೆ.

ಆರೋಪಿಯು ಸಂತ್ರಸ್ಥೆಯ ನಗ್ನ ಫೋಟೋವನ್ನು ತೆಗೆದುಕೊಂಡು ಬ್ಲಾಕ್ ಮೇಲ್‌ ಮಾಡಿ ನಿರಂತರ ಅತ್ಯಾಚಾರ ಮಾಡಿದ್ದಾನೆ. ಈ ಹಿನ್ನಲೆ ಸಜಿತ್ ನನ್ನು ಕದ್ರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

- Advertisement -

Related news

error: Content is protected !!