Friday, May 17, 2024
spot_imgspot_img
spot_imgspot_img

ಠಾಣೆಯಲ್ಲಿ ಸರ್ವೀಸ್ ರಿವಾಲ್ವರ್ ಕ್ಲೀನ್ ಮಾಡುತ್ತಿದ್ದಾಗ ಮಹಿಳೆಗೆ ಗುಂಡೇಟು

- Advertisement -G L Acharya panikkar
- Advertisement -

ಪಾಸ್‌ಪೋರ್ಟ್‌ ಪರಿಶೀಲನೆಗೆ ಪೊಲೀಸ್ ಠಾಣೆಗೆ ಬಂದಿದ್ದ ಮಹಿಳೆಯೊಬ್ಬಳಿಗೆ ಸಬ್ ಇನ್‌ಸ್ಪೆಕ್ಟರ್ ಸರ್ವೀಸ್ ರಿವಾಲ್ವಾರ್ ಅನ್ನು ಕ್ಲೀನ್ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ಹಾರಿ ತಗುಲಿದ ಘಟನೆ ಉತ್ತರ ಪ್ರದೇಶದ ಅಲಿಘರ್‌ನಲ್ಲಿ ನಡೆದಿದೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಘಟನೆಯಲ್ಲಿ ಗಾಯಗೊಂಡ ಮಹಿಳೆಯನ್ನು ಇಶ್ರತ್ ಎಂದು ಗುರುತಿಸಲಾಗಿದೆ. ಆಕೆ ತನ್ನ ಮಗನೊಂದಿಗೆ ಠಾಣೆಗೆ ಬಂದಿದ್ದರು. ಸ್ವಲ್ಪ ಸಮಯದ ನಂತರ ಬಂದ ಪೊಲೀಸ್ ಅಧಿಕಾರಿ, ಎಸ್‍ಐ ಮನೋಜ್ ಶರ್ಮಾ ಅವರಿಗೆ ಪಿಸ್ತೂಲ್ ನೀಡಿದ್ದಾರೆ. ಈ ವೇಳೆ ಸರ್ವಿಸ್ ರಿವಾಲ್ವರ್ ಕ್ಲೀನ್ ಮಾಡುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ಸಿಡಿದಿದೆ. ಇದರಿಂದ ಮಹಿಳೆ ತಲೆಗೆ ಗಂಭೀರ ಗಾಯವಾಗಿದ್ದು, ಆಕೆ ಸ್ಥಳದಲ್ಲೇ ಕುಸಿದು ಬಿದ್ದಿದ್ದಾಳೆ.
ಗಾಯಗೊಂಡ ಮಹಿಳೆಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡು ಮಹಿಳೆಯ ತಲೆಯ ಹಿಂಭಾಗಕ್ಕೆ ತಗುಲಿದೆ. ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಸ್‍ಐ ಅನ್ನು ಅಮಾನತುಗೊಳಿಸಲಾಗಿದ್ದು, ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಘಟನೆ ಬಳಿಕ ಎಸ್‍ಐ ತಲೆಮರೆಸಿಕೊಂಡಿದ್ದು ಬಂಧನಕ್ಕೆ ಬಲೆ ಬೀಸಲಾಗಿದೆ.

- Advertisement -

Related news

error: Content is protected !!