- Advertisement -
- Advertisement -


ಕೋಲಾರ: ಮೂರು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆಯಾದ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಅಗರ ಗ್ರಾಮದ ಶಾರದಮ್ಮ (38) ಎಂದು ಗುರುತಿಸಲಾಗಿದೆ.
ಈಕೆಯ ಮೃತದೇಹ ಮುಳಬಾಗಿಲು ತಾಲೂಕಿನ ಅಗರ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ. ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಅಗರ ಗ್ರಾಮದ ವೆಂಕಟರಾಮ್ ಕೃತ್ಯವೆಸಗಿರಬಹುದು ಎಂಬ ಶಂಕೆ ವ್ಯಕ್ತವಾದ ಹಿನ್ನೆಲೆ ಆತನನ್ನು ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಮುಳಬಾಗಿಲು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
- Advertisement -