Monday, April 29, 2024
spot_imgspot_img
spot_imgspot_img

ಬೆಳ್ತಂಗಡಿ: ದ್ವಿಚಕ್ರ ವಾಹನ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು

- Advertisement -G L Acharya panikkar
- Advertisement -

ಬೆಳ್ತಂಗಡಿ: ದ್ವಿಚಕ್ರ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿ ನಡೆದಿದ್ದು,ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ನಾವೂರು ಗ್ರಾಮದ ನಿವಾಸಿ ಸಂಜೀವ ಅವರ ಪತ್ನಿ ಕಮಲಾ ಮೃತ ಮಹಿಳೆ.

ಸಂತೋಷ್ ಎಂಬವರು ಚಲಾಯಿಸುತ್ತಿದ್ದ ದ್ವಿಚಕ್ರ ವಾಹನದಲ್ಲಿ ಸಹ ಸವಾರೆಯಾಗಿ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ತೋಟತ್ತಾಡಿ ಗ್ರಾಮದ ಮೂರ್ಜೆಗೆ ತಲುಪಿದಾಗ ಚಾಲಕನ ನಿಯಂತ್ರಣ ಕಳೆದುಕೊಂಡು ವಾಹನ ಮಗುಚಿ ಬಿದ್ದಿದೆ. ಕಮಲ ರಸ್ತೆಗೆ ಎಸೆಯಲ್ಪಟ್ಟು ಗಂಭಿರವಾಗಿ ಗಾಯಗೊಂಡಿದ್ದರು.

ಗಾಯಾಳುವನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

- Advertisement -

Related news

error: Content is protected !!