- Advertisement -
- Advertisement -
ಕುಂದಾಪುರ: ನಗರದ ಶಾಸ್ತ್ರಿ ಸರ್ಕಲ್ ಬಳಿಯ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೋರ್ವರು ನಾಪತ್ತೆಯಾದ ಘಟನೆ ನಡೆದಿದೆ.
ಗಂಗೊಳ್ಳಿಯ ನಿವಾಸಿ ರೇಣುಕಾ ಖಾರ್ವಿ (32) ಆಗಸ್ಟ್ 12ರಿಂದ ನಾಪತ್ತೆಯಾಗಿದ್ದಾರೆ.
ಆಗಸ್ಟ್ 12ರ ಬೆಳಗ್ಗೆ ರೇಣುಕಾ ಕೆಲಸಕ್ಕೆ ಹೋಗಿದ್ದು, ಸಂಜೆ ಪತಿ ಕರೆ ಮಾಡಿದಾಗ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ರೇಣುಕಾ ಅವರು ಆಗಸ್ಟ್ 12 ರಂದು ಕೆಲಸಕ್ಕೆ ಬಂದಿಲ್ಲ ಎಂದು ಆಕೆ ಕೆಲಸ ಮಾಡುತ್ತಿದ್ದ ಅಂಗಡಿ ಮಾಲೀಕರು ತಿಳಿಸಿದ್ದಾರೆ.
ರೇಣುಕಾ ತನ್ನ ಸಹೋದರನಿಗೆ ಕರೆ ಮಾಡಿ ಆಗಸ್ಟ್ 13 ರಂದು ಬೆಳಿಗ್ಗೆ ಉಡುಪಿಯಲ್ಲಿದ್ದೇನೆ ಎಂದು ತಿಳಿಸಿದ್ದಾರೆ. ಬಳಿಕ ತಾನು ಬೆಂಗಳೂರಿನಲ್ಲಿದ್ದೇನೆ ಮತ್ತು ಟ್ರೇಸ್ ಮಾಡುವ ಅಗತ್ಯವಿಲ್ಲ ಎಂದು ಹೇಳಿ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತು ಗಂಗೊಳ್ಳಿ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
- Advertisement -