Saturday, May 18, 2024
spot_imgspot_img
spot_imgspot_img

ಮಂಗಳೂರು: ಸಿಟಿ ಸೆಂಟರ್ ಮಾಲ್ ಗೆ ಬಂದಿದ್ದ ಮಹಿಳೆ ನಾಪತ್ತೆ – ಪ್ರಕರಣ ದಾಖಲು

- Advertisement -G L Acharya panikkar
- Advertisement -

ಮಂಗಳೂರು: ಮಂಗಳೂರು ನಗರದ ಸಿಟಿ ಸೆಂಟರ್ ಮಾಲ್ ಗೆ ತಮ್ಮ ತಾಯಿಯೊಂದಿಗೆ ಏ.28 ರಂದು ಬಂದ ಮಹಿಳೆಯೋರ್ವರು ಸಿಟಿ ಸೆಂಟರ್ ಮಾಲ್ ನಿಂದ ನಾಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಪೆರ್ಮನ್ನೂರು ಗ್ರಾಮದ ಕೆರೆಬೈಲ್ ಗುಡ್ಡೆಯ ನಿವಾಸಿಯಾದ ಸಫಾನ ಎಂಬವರು ಸಿಟಿ ಸೆಂಟರ್ ಮಾಲ್ ನಿಂದ ಕಾಣೆಯಾದ ಮಹಿಳೆ

ಈ ಬಗ್ಗೆ ಮಂಗಳೂರು ನಗರದ ಉತ್ತರ ಪೊಲೀಸ್ ಠಾಣೆಯಲ್ಲಿ ಮಹಿಳಾ ಕಾಣೆ ಪ್ರಕರಣ ದಾಖಲಾಗಿರುತ್ತದೆ. ಸಫಾನ ರವರಿಗೆ ಇಬ್ಬರು ಮಕ್ಕಳಿದ್ದು ಸಫಾನ ರವರ ವಯಸ್ಸು:-27 ವರ್ಷ , 4.5 ಅಡಿ ಎತ್ತರ, ಬಿಳಿ ಮೈಬಣ್ಣ, ಹಾಗೂ ಕಪ್ಪು ಬಣ್ಣದ ಬುರ್ಖಾ ಧರಿಸಿರುತ್ತಾರೆ ಬ್ಯಾರಿ, ಕನ್ನಡ, ತುಳು ಭಾಷೆಯನ್ನು ಮಾತನಾಡುತ್ತಾರೆ.. ಚಹರೆವುಳ್ಳ ಮಹಿಳೆಯು ಎಲ್ಲಿಯಾದರೂ ಕಂಡು ಬಂದಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಗೆ ಅಥವಾ ಕಂಟ್ರೋಲ್ ರೂಂ ಗೆ ಮಾಹಿತಿ ನೀಡಬೇಕಾಗಿ ಕೋರಿಕೆ. ಸಂಪರ್ಕಿಸಬೇಕಾದ ಮೊಬೈಲ್ ನಂಬ್ರ: 9480805338,9480802321,0824-2220516

- Advertisement -

Related news

error: Content is protected !!