Monday, June 15, 2026
spot_imgspot_img
spot_imgspot_img

ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ..!

- Advertisement -
- Advertisement -

ಭಟ್ಕಳ : ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಯ್ಕಿಣಿ ಗ್ರಾಮದ ಬಾಕಡಕೇರಿಯಲ್ಲಿ ನಡೆದಿದೆ.

ಶಿರಾಲಿ ಮಣ್ಣಹೊಂಡ ನಿವಾಸಿ ದಿನೇಶ್ (28) ಮೃತರು ಎನ್ನಲಾಗಿದೆ. ದಿನೇಶ್ ರಸ್ತೆ ಮತ್ತು ಇನ್ನಿತರ ಕಾಮಗಾರಿಗಳ ಗುತ್ತಿಗೆದಾರನಾಗಿ ಕೆಲಸ ಮಾಡಿಕೊಂಡಿದ್ದರು. ಕೆಲಸಕ್ಕೆಂದು ಬೆಳಿಗ್ಗೆ ಮನೆಯಿಂದ ಹೋದವರು ಮನೆಗೆ ಬಾರದೆ ಬಾಕಡಕೇರಿ ಸ್ಮಶಾನದ ಸಮೀಪ ಗೇರು ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ‌. ಈ ಕುರಿತು ಮುರ್ಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೃತದೇಹವನ್ನು ಮುರ್ಡೇಶ್ವರ ಆಸ್ಪತ್ರೆಗೆ ರವಾನಿಸಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ.

- Advertisement -

Related news

error: Content is protected !!