Friday, July 24, 2026
spot_imgspot_img
spot_imgspot_img

ಯುವಕನೊಬ್ಬ ಇನ್ಸ್ಟಾಗ್ರಾಮ್‌ನಲ್ಲಿ RIP ಎಂದು ಪೋಸ್ಟ್ ಮಾಡಿ ಆತ್ಮಹತ್ಯೆಗೆ ಶರಣು..!

- Advertisement -
- Advertisement -

ಯುವಕನೊಬ್ಬ ಇನ್ಸ್ಟಾಗ್ರಾಮ್‌ನಲ್ಲಿ RIP ಎಂದು ಪೋಸ್ಟ್ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ಎರ್ನಾಕುಲಂನ ಆಲುವಾದಲ್ಲಿ ನಡೆದಿದೆ.

ಷರೀಫ್ ಅವರ ಪುತ್ರ 28 ವರ್ಷದ ಅಜ್ಮಲ್ ಪರೀಫ್ ಅವರು ತಮ್ಮ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಸಾಯುವ ಹತ್ತು ನಿಮಿಷಗಳ ಮೊದಲು, ಅಜ್ಮಲ್ ತನ್ನ ಸಾವನ್ನು ಪ್ರಕಟಿಸಿ ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾನೆ.

ಶುಕ್ರವಾರ ಸಂಜೆ 6:30ರ ಸುಮಾರಿಗೆ ಈ ಘಟನೆ ನಡೆದಿದೆ. ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅಜ್ಮಲ್ ನನ್ನು ಕಂಡ ಕುಟುಂಬಸ್ಥರು ಆತನನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ದರೂ ಆತ ಮೃತಪಟ್ಟಿದ್ದಾನೆ. ಅಜ್ಮಲ್ ದುಬೈನಲ್ಲಿದ್ದು, ಉತ್ತಮ ಕೆಲಸ ಸಿಗದ ಕಾರಣ ಆತ ಕೊಂಚ ಖಿನ್ನತೆಗೆ ಒಳಗಾಗಿದ್ದ ಎಂದು ಕುಟುಂಬದವರು ಹೇಳಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಿ, ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಅಜ್ಮಲ್ ಅವರ ಇನ್ಸ್ಟಾಗ್ರಾಮ್ ಖಾತೆಯಲ್ಲಿ 14 ಸಾವಿರಕ್ಕೂ ಹೆಚ್ಚು ಫಾಲೋವರ್ಸ್‌ ಇದ್ದರು.

- Advertisement -

Related news

error: Content is protected !!