- Advertisement -
- Advertisement -



ಬ್ಯಾನರ್ ಕಟ್ಟುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಯುವಕನೋರ್ವ ಮೃತಪಟ್ಟಿರುವ ಘಟನೆ ಮಡಿಕೇರಿಯ ಮೂರ್ನಾಡು ಪಟ್ಟಣದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಮೂರ್ನಾಡು ನಿವಾಸಿ ಆರಿಫ್ (34) ಮೃತ ದುರ್ದೈವಿ.
ಮೂರ್ನಾಡಿನಲ್ಲಿ ನಡೆಯಲಿರುವ ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿಯ ಬ್ಯಾನರ್ ಕಟ್ಟುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಆರಿಫ್ ಮೃತಪಟ್ಟಿದ್ದಾರೆ. ಜೊತೆಯಲ್ಲಿದ್ದ ಯುವಕರು ಅಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ. ಮೂರ್ನಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -