- Advertisement -
- Advertisement -





ಚಿಕ್ಕಮಗಳೂರು: ಗುಂಡೇಟಿನಿಂದ ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಉಳುವಾಗಿಲು ಗ್ರಾಮದಲ್ಲಿ ನಡೆದಿದೆ.
ಮೃತ ಯುವಕನನ್ನು ಕೆರೆಮಕ್ಕಿ ಗ್ರಾಮದ ಸಂಜು(33) ಎಂದು ಗುರುತಿಸಲಾಗಿದೆ.
ಎದೆಗೆ ತೋಟದ ಕೋವಿಯಿಂದ ಗುಂಡು ತಗುಲಿ ಸಾವನ್ನಪ್ಪಿದ ಸ್ಥಿತಿಯಲ್ಲಿ ಸಂಜು ಮೃತದೇಹ ಉಳುವಾಗಿಲು ಸಮೀಪ ಮುಖ್ಯರಸ್ತೆಯಲ್ಲಿ ಬಿದ್ದಿತ್ತು ಎನ್ನಲಾಗಿದೆ. ಮೃತದೇಹದ ಸಮೀಪವೇ ತೋಟದ ಬೇಲಿಯಲ್ಲಿ ತೋಟಕೋವಿಯೊಂದು ಪತ್ತೆಯಾಗಿದೆ. ಶಿಕಾರಿಗೆ ತೆರಳಿದ ಸಂದರ್ಭದಲ್ಲಿ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ.
ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಇದು ಆಕಸ್ಮಿಕವಾಗಿ ಗುಂಡು ತಗುಲಿ ಆಗಿರುವ ಸಾವೇ ಅಥವಾ ಉದ್ದೇಶಪೂರ್ವಕವಾಗಿ ಕೊಲೆ ಮಾಡಲಾಗಿದೆಯೇ ? ಈ ಬಗ್ಗೆ ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. ಮೃತ ಸಂಜು ಕೆರೆಮಕ್ಕಿ ಗ್ರಾಮದ ದಿವಂಗತ ಜೂಲೇಗೌಡ ಎಂಬವರ ಪುತ್ರ. ಈ ಘಟನೆಯ ಬಗ್ಗೆ ಮಲ್ಲಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
- Advertisement -