Tuesday, April 22, 2025
spot_imgspot_img
spot_imgspot_img

ಕಾಸರಗೋಡು: ಮೆದುಳು ಜ್ವರದಿಂದ ಯುವಕ ಮೃತ್ಯು

- Advertisement -
- Advertisement -

ಕಾಸರಗೋಡು : ಅಮಿಬಿಕ್ ಮೆದುಳು ಜ್ವರದಿಂದ ಕಾಸರಗೋಡಿನ ಯುವಕನೋರ್ವ ಮೃತಪಟ್ಟ ದಾರುಣ ಘಟನೆ ನಡೆದಿದೆ.

ಚಟ್ಟಂಚಾಲ್ ಉಕ್ರಂಪಾಡಿಯ ಮಣಿಕಂಠ (36) ಮೃತಪಟ್ಟವರು.

ಮುಂಬೈಯಲ್ಲಿ ಕೆಲಸ ಮಾಡುತ್ತಿದ್ದ ಮಣಿಕಂಠ ಅನಾರೋಗ್ಯದ ಹಿನ್ನಲೆಯಲ್ಲಿ ಊರಿಗೆ ಬಂದಿದ್ದರು. ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಜ್ವರ ಕಡಿಮೆಯಾಗದ ಹಿನ್ನಲೆ ಕಣ್ಣೂರಿನ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಅಲ್ಲಿ ಅವರನ್ನು ತಪಾಸಣೆಗೊಳಪಡಿಸಿದಾಗ ಅಮಿಬಿಕ್ ಸೋಂಕು ಇರುವುದು ದೃಢಪಟ್ಟಿತ್ತು.

ಮಣಿಕಂಠ ಅವರಿಗೆ ಮುಂಬೈಯಲ್ಲಿ ಸೋಂಕು ತಗಲಿರಬಹುದು ಎಂದು ಶಂಕಿಸಲಾಗಿದೆ. ಇದರಿಂದ ಜಿಲ್ಲೆಯಲ್ಲಿ ಯಾವುದೇ ಆತಂಕ ಪಡಬೇಕಿಲ್ಲ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ. ಈ ಜ್ವರದ ಬಗ್ಗೆ ಮುನ್ನಚ್ಚರಿಕೆ ವಹಿಸಬೇಕುಎಂದು ಆರೋಗ್ಯ ಇಲಾಖೆ ತಿಳಿಸಿದೆ.

- Advertisement -

Related news

error: Content is protected !!