





ಮಂಡ್ಯ: ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಅರುಣ್‌ಕುಮಾರ್ (26) ಮೃತ ದುರ್ದೈವಿ. ಅರುಣ್ ಗ್ರಾಮದ ಬಳಿ ಇರುವ ಲಿಂಗಾಪುರ ಕೆರೆಯಲ್ಲಿ ತಂದೆಯ ಜೊತೆಗೆ ಮೀನು ಹಿಡಿಯಲು ಹೋಗಿದ್ದ ವೇಳೆ ಕೆರೆಯ ಕೆಸರು ಗುಂಡಿಯಲ್ಲಿ ಸಿಲುಕಿ ಸಾವನ್ನಪ್ಪಿದ್ದಾನೆ. ಸುದ್ಧಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ನುರಿತ ಈಜುಗಾರರ ಸಹಕಾರದಿಂದ ಕೆರೆಯ ಹೂಳಿನಲ್ಲಿ ಸಿಲುಕಿದ್ದ ಅರಣ್‌ಕುಮಾರ್‌ನ ಶವವನ್ನು ಹೊರತೆಗೆಯುವಲ್ಲಿ ಯಶಸ್ವಿಯಾದರು
ನಂತರ ಶವವನ್ನು ವಶಕ್ಕೆ ಪಡೆದ ಪೊಲೀಸರು ಪಟ್ಟಣ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿ, ಪರೀಕ್ಷೆ ನಡೆಸಿದ ಬಳಿಕ ವಾರಸುದಾರರಿಗೆ ನೀಡಲಾಯಿತು. ಅರುಣ್‌ಕುಮಾರ್‌ನ ತಂದೆ ಸಹ ಮೀನು ಹಿಡಿಯಲು ಹೋಗಿದ್ದು, ಅವರಿಗೆ ಯಾವುದೇ ತೊಂದರೆಯಾಗಿಲ್ಲ. ಕಿಕ್ಕೇರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.








