- Advertisement -
- Advertisement -
ಉಡುಪಿ: ದುಬೈನಲ್ಲಿ ವಾಸವಾಗಿದ್ದ ಕುಂದಾಪುರದ ಮೂಲದ ಯುವಕ ಬಿಸಿಲಿನ ತಾಪ ತಾಳಲಾರದೆ ಮೃತಪಟ್ಟ ಘಟನೆ ವರದಿಯಾಗಿದೆ.
ಮೃತ ಯುವಕ ಕುಂದಾಪುರದ ವಿಠಲವಾಡಿ ನಿವಾಸಿ ಯುವಕ ಶಾನ್ ಡಿಸೋಜಾ (19) ಎಂದು ತಿಳಿದು ಬಂದಿದೆ.
ದುಬೈಯಿಂದ ಸುಮಾರು 115 ಕಿ.ಮೀ. ದೂರದಲ್ಲಿರುವ ರಾಸ್ ಅಲ್ ಖೈಮಾದ ಸೈಂಟ್ ಮೆರೀಸ್ ಚರ್ಚ್ ಬಳಿ ಮನೆಯಲ್ಲಿ ವಾಸವಾಗಿದ್ದರು. ಖಾಸಗಿ ಕಂಪೆನಿಯಲ್ಲಿ ಮ್ಯಾನೆಜರ್ ಆಗಿದ್ದ ಶಾನ್, ಅಲ್ಲಿಯೇ ಕಾಲೇಜು ವಿದ್ಯಾಭ್ಯಾಸ ಮಾಡುತ್ತಿದ್ದರು. ಬಿಸಿಲಿನ ತಾಪಕ್ಕೆ ಮೂರ್ಚೆ ಹೋಗಿ ಆರ್‌ಎಕೆ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
- Advertisement -