- Advertisement -
- Advertisement -





ಮೈಸೂರಿನ ಮಳವಳ್ಳಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸುಳ್ಯದ ಯುವಕ ಮೃತಪಟ್ಟ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಮೃತ ದುರ್ದೈವಿಯನ್ನು ಸುಳ್ಯ ಮೂಲದ ದೀಕ್ಷಿತ್ ಎಂದು ಗುರುತಿಸಲಾಗಿದೆ.
ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸದಲ್ಲಿದ್ದ ದೀಕ್ಷಿತ್ ಬೆಂಗಳೂರಿನಿಂದ ಕಂದಡ್ಕದ ಕಲ್ವಾರಿನ ತನ್ನ ಮನೆಗೆ ಬೈಕ್‌ನಲ್ಲಿ ಬರುತ್ತಿದ್ದ ವೇಳೆ ಮೈಸೂರು ಸಮೀಪದ ಮಳವಳ್ಳಿಯಲ್ಲಿ ಅಪರಿಚಿತ ವಾಹನವೊಂದು ಬೈಕ್‌ಗೆ ಢಿಕ್ಕಿ ಹೊಡೆದು ಪರಾರಿಯಾಗಿದೆ.
ಅಪಘಾತದಲ್ಲಿ ಗಂಭೀರ ಗಾಯಗೊಂಡ ದೀಕ್ಷಿತ್‌ರನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಅವರು ಮೃತಪಟ್ಟಿದ್ದರೆನ್ನಲಾಗಿದೆ. ಮೃತರು ತಂದೆ, ತಾಯಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
- Advertisement -








