Monday, June 8, 2026
spot_imgspot_img
spot_imgspot_img

ಉಡುಪಿ: ರೈಲಿನಿಂದ ಇಳಿಯುವಾಗ ಜಾರಿಬಿದ್ದು ಯುವಕ ಗಂಭೀರ

- Advertisement -
- Advertisement -

ಉಡುಪಿ: ಉಡುಪಿಯಿಂದ ಗೋವಾದ ಕಡೆಗೆ ಹೋಗುತ್ತಿದ್ದ ರೈಲಿನಿಂದ ಇಳಿಯಲು ಹೋಗಿ ಜಾರಿಬಿದ್ದು ಯುವಕನೊಬ್ಬ ಗಂಭೀರ ಗಾಯಗೊಂಡಿರುವ ಘಟನೆ ಬೀಜೂರು ಎಂಬಲ್ಲಿ ಸಂಭವಿಸಿದೆ.
ಗಾಯಾಳುವನ್ನು ಸುಖೇಶ್ (35) ಎಂದು ಗುರುತಿಸಲಾಗಿದೆ.

ರೈಲ್ವೆ ಇಲಾಖೆಯಿಂದ ಕರೆ ಬಂದ ಮಾಹಿತಿ ಅನ್ವಯ ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ತೆರಳಿದಾಗ ಯುವಕನೊಬ್ಬ ಗಂಭೀರ ಗಾಯಗೊಂಡು ಸ್ಥಳದಲ್ಲಿ ಬಿದ್ದುಕೊಂಡಿದ್ದು ತಿಳಿದು ಬಂದಿದೆ. ಚಲಿಸುತ್ತಿದ್ದ ರೈಲಿನಿಂದ ಇಳಿಯುವ ಆತುರದಲ್ಲಿ ನಿಯಂತ್ರಣ ತಪ್ಪಿ ಬಿದ್ದಿರಬೇಕೆಂದು ಶಂಕೆ ವ್ಯಕ್ತವಾಗಿದೆ .
ಗಾಯಾಳುವನ್ನು ಬೈಂದೂರ್ ಸಿ ಹೆಚ್ ಸಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆಯನ್ನು ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Related news

error: Content is protected !!