Monday, June 15, 2026
spot_imgspot_img
spot_imgspot_img

ಉಡುಪಿ : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವಕನೋರ್ವ ಹೃದಯಾಘಾತದಿಂದ ಸಾವು

- Advertisement -
- Advertisement -

ಉಡುಪಿ : ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಉಡುಪಿ ಕುಂದಾಪುರ -ಶಿವಮೊಗ್ಗ ರಾಜ್ಯ ರಸ್ತೆಯ ಸಿದ್ದಾಪುರ ಗ್ರಾಮದ ಜನ್ಸಾಲೆ ಬಳಿ ನಡೆದಿದೆ.

ಮೃತ ಯುವಕನನ್ನು ಗದಗ ಜಿಲ್ಲೆಯ ಚಂದ್ರು (24) ಎಂದು ಗುರುತಿಸಲಾಗಿದೆ.

ಇವರು ದಾವಣಗೆರೆಗೆ ತೆರಳುವುದಕ್ಕೆ ಉಡುಪಿಯಲ್ಲಿ ಖಾಸಗಿ ಬಸ್ ಹತ್ತಿ ಪ್ರಯಾಣಿಸುತ್ತಿದ್ದು, ದಾರಿ ಮಧ್ಯೆ ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ ಎನ್ನಲಾಗಿದೆ.

ಕೂಡಲೇ ಚಾಲಕ ಬಸ್ಸನ್ನು ಸಿದ್ದಾಪುರ ಪೇಟೆಯಲ್ಲಿ ನಿಲ್ಲಿಸಿ ಚಂದ್ರು ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ಅಂಬ್ಯುಲೆನ್ಸ್ ಮೂಲಕ ಕರೆದುಕೊಂಡು ಹೋಗಿದ್ದಾರೆ.

ಅಲ್ಲಿ ಪರೀಕ್ಷಿಸಿದ ವೈದ್ಯರು ಚಂದ್ರು ಅವರು ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ.ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!