Monday, May 6, 2024
spot_imgspot_img
spot_imgspot_img

ಬೆಳ್ತಂಗಡಿ: ಹೊಸ ವರ್ಷದ ಪಾರ್ಟಿಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಗಲಾಟೆ; ಸ್ನೇಹಿತನ ಮೂಗನ್ನೇ ಕಚ್ಚಿ ತುಂಡರಿಸಿದ ಯುವಕ

- Advertisement -G L Acharya panikkar
- Advertisement -

ಬೆಳ್ತಂಗಡಿ: ಹೊಸ ವರ್ಷದ ಆಚರಣೆಯ ಪಾರ್ಟಿಯಲ್ಲಿ ಸ್ನೇಹಿತನ ಜೊತೆ ಕ್ಷುಲ್ಲಕ ವಿಚಾರಕ್ಕೆ ಗಲಾಟೆಯಾಗಿ ನಂತರ ಕುಡಿದ ಮತ್ತಿನಲ್ಲಿ ಒಬ್ಬನ ಮೂಗು ಕಚ್ಚಿ ತುಂಡರಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಪಿಲ್ಯದಲ್ಲಿ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಪಿಲ್ಯ ಗ್ರಾಮದ ಉಲ್ಪೆ ಎಂಬಲ್ಲಿನ ನಿವಾಸಿ ದೀಕ್ಷಿತ್ (28) ಮೂಗು ತುಂಡರಿಸಿಕೊಂಡ ಯುವಕ.

ಮೂಗು ತುಂಡರಿಸಿದ ಆರೋಪಿ ಯುವಕ ರಾಕೇಶ್ ಎಂಬಾತ ಮೂಲತಃ ಮೂಡಿಗೆರೆ ತಾಲೂಕಿನವನಾಗಿದ್ದು , ಪ್ರಸ್ತುತ ಪಿಲ್ಯ ಗ್ರಾಮದ ಸಂಬಂಧಿಕರ ಮನೆಯಲ್ಲಿ ವಾಸವಿದ್ದು , ಸ್ಥಳೀಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ.

ಡಿಸೆಂಬರ್ 31 ರಂದು ರಾತ್ರಿ ಹೊಸ ವರ್ಷದ ಸಂದರ್ಭದಲ್ಲಿ ಮದ್ಯ ಸೇವಿಸಿ ಕ್ಷುಲ್ಲಕ ವಿಚಾರದಲ್ಲಿ ಸ್ನೇಹಿತನ ಜೊತೆ ಗಲಾಟೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ತನ್ನ ಸ್ನೇಹಿತನ ಮೂಗನ್ನು ಕಚ್ಚಿ ತುಂಡರಿಸಿದ್ದಾನೆ. ಘಟನೆಯಿಂದ ಗಂಭೀರ ಗಾಯಗೊಂಡ ಯುವಕನನ್ನು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಪ್ರಕರಣ ಸಂಬಂಧ ವೇಣೂರು ಪೋಲಿಸರಿಗೆ ದೂರು ನೀಡಲಾಗಿದ್ದು , ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!