Sunday, May 5, 2024
spot_imgspot_img
spot_imgspot_img

ಶಿಕ್ಷಕನಾಗುವ ಕನಸು ಕಂಡಿದ್ದ ಯುವಕ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ..!

- Advertisement -G L Acharya panikkar
- Advertisement -

ಶಿಕ್ಷಕನಾಗುವ ಕನಸು ಕಂಡಿದ್ದ ಯುವಕ ಸರ್ಕಾರದ ನೇಮಕಾತಿ ಲಿಸ್ಟ್‌ನಲ್ಲಿ ಹೆಸರು ಕೈ ಬಿಟ್ಟಿದ್ದಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದಲ್ಲಿ ನಡೆದಿದೆ. ಮೃತ ಯುವಕನನ್ನು ಚಿಕ್ಕಬುದೂರಿನ 25 ವರ್ಷದ ಚನ್ನಬಸವ ಎಂದು ಗುರುತಿಸಲಾಗಿದೆ.

ಯಾರೋ ಮಾಡಿದ ತಪ್ಪಿಗೆ ವ್ಯವಸ್ಥೆ ನನಗೆ ಶಿಕ್ಷೆ ನೀಡಿದೆ ಎಂದು ಡೆತ್‌ನೋಟ್ ಬರೆದಿರುವ ಚನ್ನಬಸವ ಶಾಲೆಯ ಆವರಣದಲ್ಲಿರೋ ಮರಕ್ಕೆ ನೇಣು ಬಿಗಿದು ಸಾವಿಗೆ ಶರಣಾಗಿದ್ದಾನೆ. ದೇವದುರ್ಗ ಪಟ್ಟಣದ ಜ್ಞಾನಗಂಗಾ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿರೋ ಮರದ ಬಳಿ ಯುವಕನ ಮೃತದೇಹ ಪತ್ತೆಯಾಗಿದೆ. 2022ರ ನೇಮಕಾತಿ ಪ್ರಕ್ರಿಯೆಯಲ್ಲಿ 6-8ನೇ ತರಗತಿ ಶಿಕ್ಷಕರ ಹುದ್ದೆಗೆ ಚನ್ನಬಸವ ಆಯ್ಕೆಯಾಗಿದ್ದರು. ಆದರೆ ಕೊನೆ ಕ್ಷಣದಲ್ಲಿ ನೇಮಕಾತಿ ಲಿಸ್ಟ್‌ನಿಂದ‌ ಈ ಯುವಕನ ಹೆಸರು ಕೈ ಬಿಡಲಾಗಿತ್ತು ಎನ್ನಲಾಗಿದೆ. ಇದಾದ ಬಳಿಕ ಮತ್ತೊಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ಚನ್ನಬಸವ ಬರೆದಿದ್ದರು. ಆದರೆ ಆ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಫೇಲ್ ಆಗಿದ್ದರು.

ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಫೇಲ್ ಆದ ಮೇಲೂ ಚನ್ನಬಸವ ಶಿಕ್ಷಕನಾಗಲು ಸಾಕಷ್ಟು ಕನಸು ಕಟ್ಟಿಕೊಂಡಿದ್ದರು. ದೇವದುರ್ಗ ಪಟ್ಟಣದಲ್ಲೇ ರೂಮ್ ಮಾಡಿದ್ದ ಚನ್ನಬಸವ ಮುಂದಿನ ನೇಮಕಾತಿ ಪರೀಕ್ಷೆಗೆ ತಯಾರಿ ನಡೆಸಿದ್ದರು. ಆದರೆ ಏನಾಯ್ತೋ ಗೊತ್ತಿಲ್ಲ. ಇಂದು ಸರ್ಕಾರದ ಆಡಳಿತ ವ್ಯವಸ್ಥೆ ವಿರುದ್ಧ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಡೆತ್‌ನೋಟ್‌ನಲ್ಲಿ ಯಾರೋ ಮಾಡಿದ ತಪ್ಪಿಗೆ ವ್ಯವಸ್ಥೆ ನನಗೆ ಶಿಕ್ಷೆ ನೀಡಿದೆ. ಆಡಳಿತ ವ್ಯವಸ್ಥೆಗೆ ನನ್ನ ಧಿಕ್ಕಾರವಿರಲಿ ಎಂದು ಆಕ್ರೋಶ ವ್ಯಕ್ತಪಡಿಸಲಾಗಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!