Saturday, June 28, 2025
spot_imgspot_img
spot_imgspot_img

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು..!

- Advertisement -
- Advertisement -

ಹೋಳಿ ಹಬ್ಬದ ಹಿನ್ನೆಲೆಯಲ್ಲಿ ಬಣ್ಣ ಆಡಿದ ನಂತರ ಕೆರೆಯಲ್ಲಿ ಈಜಾಡಲು ಹೋಗಿ ಯುವಕ ನೀರು ಪಾಲಾಗಿರುವ ಘಟನೆ ಯಾದಗಿರಿ ತಾಲೂಕಿನ ಯರಗೋಳ ವ್ಯಾಪ್ತಿಯ ಅರಕೇರಾ ಬಿ ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟ ಯುವಕ ಅರಕೇಕಾ ಬಿ. ಗ್ರಾಮದ ಯುವಕ ಬಸವಲಿಂಗಪ್ಪ (18) ಎಂದು ಗುರುತಿಸಲಾಗಿದೆ.

ಬೆಳಿಗ್ಗೆ ಸ್ನೇಹಿತರೊಂದಿಗೆ ಹೋಳಿ ಹಬ್ಬ ಆಚರಿಸಿ, ಬಣ್ಣದೋಕಳಿ ಆಡಿದ ನಂತರ ತಮ್ಮನ ಜೊತೆ ಕೆರೆಗೆ ಈಜಾಡಲು ತೆರಳಿದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಧಾವಿಸಿದ ಗ್ರಾಮಸ್ಥರು ಮೃತದೇಹ ಹೊರ ತೆಗೆದಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

- Advertisement -

Related news

error: Content is protected !!