Sunday, June 7, 2026
spot_imgspot_img
spot_imgspot_img

ಡೆತ್‌ನೋಟ್ ಬರೆದಿಟ್ಟು ಯುವತಿ ನೇಣಿಗೆ ಶರಣು..!

- Advertisement -
- Advertisement -

ಡೆತ್‌ನೋಟ್ ಬರೆದಿಟ್ಟು ಯುವತಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದೊಡ್ಡಬಳ್ಳಾಪುರದ ತ್ಯಾಗರಾಜನಗರದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವಳು ಜಾನ್ಸಿ (17) ಎಂದು ಗುರುತಿಸಲಾಗಿದೆ.

ಜಾನ್ಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆಗಿದ್ದು, ಕಾಲೇಜಿನಿಂದ ಮನೆಗೆ ಬಂದಿದ್ದಾಳೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಡೆತ್‌ನೋಟ್‌ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ನಾನು ಯಾರಿಗೂ ಮೋಸ ಮಾಡಿಲ್ಲ. ಬುಜ್ಜಿ, ಆಲ್ ಫ್ರೆಂಡ್ಸ್ ಮಿಸ್ ಯೂ ನಾನು‌ ಈ ಲೋಕವನ್ನು ಬಿಟ್ಟು ತೆರಳುತ್ತದ್ದೆನೆ ಎಲ್ಲರೂ ಖುಷಿಯಾಗಿರಿ ಎಂದು ಡೆತ್‌ನೋಟ್‌ನಲ್ಲಿ ಬರೆಯಲಾಗಿದೆ.ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೊಡ್ಡಬಳ್ಳಾಪುರ ನಗರ ಠಾಣೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!