Monday, April 29, 2024
spot_imgspot_img
spot_imgspot_img

ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಕಟ್ಟಡದಿಂದ ಜಿಗಿದು ಸಾವು

- Advertisement -G L Acharya panikkar
- Advertisement -

ಧರ್ಮಸ್ಥಳದಲ್ಲಿ ನೇತ್ರಾವತಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ಅಪಾರ್ಟ್‌‌ನಿಂದ ಜಿಗಿದು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ವಿಜಯಲಕ್ಷ್ಮಿ (17) ವರ್ಷ ಮೃತ ಯುವತಿ. ಈ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ. ಖಿನ್ನತೆಗೊಳಗಾಗಿ ವಿದ್ಯಾರ್ಥಿನಿ ಇಲ್ಲಿನ ಬ್ರೈಡ್ ಅಪಾರ್ಟ್ ಮೆಂಟ್ ಕಟ್ಟಡದ ಮೇಲಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಆತ್ಮಹತ್ಯೆ ಮಾಡಿಕೊಳ್ಳಲು ಧರ್ಮಸ್ಥಳಕ್ಕೆ ಹೋಗಿದ್ದಳು. ಅಲ್ಲಿ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಈ ವೇಳೆ ಸ್ಥಳೀಯರಿಬ್ಬರು ರಕ್ಷಣೆ ಮಾಡಿ ಬುದ್ಧಿ ಹೇಳಿ ಕಳುಹಿಸಿದ್ದರು. ಪೋಷಕರಿಗೆ ಫೋನ್ ಮಾಡಿ ತಿಳಿ ಹೇಳಿ ಯುವತಿಯನ್ನು ವಾಪಸ್ ಕಳುಹಿಸಿದ್ದರು. ಧರ್ಮಸ್ಥಳದಿಂದ ಬೆಂಗಳೂರಿಗೆ ವಾಪಸ್ ಬಂದು ಅಪಾರ್ಟ್ ಮೆಂಟ್ ನ ಟೆರೇಸ್ ಮೇಲಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಇತ್ತ ಪುತ್ರಿ ಕಾಣೆಯಾಗಿದ್ದ ಬಗ್ಗೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೈಂಟ್ ಕೂಡ ದಾಖಲಾಗಿತ್ತು. ಸದ್ಯ ಯುವತಿ ಆತ್ಮಹತ್ಯೆ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

- Advertisement -

Related news

error: Content is protected !!