Sunday, June 29, 2025
spot_imgspot_img
spot_imgspot_img

ಪುತ್ತೂರು : ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವತಿ ಮೃತ್ಯು

- Advertisement -
- Advertisement -

ಪುತ್ತೂರು : ಕಬಕ ಸಮೀಪದ ಕೂವೆತ್ತಿಲದಲ್ಲಿ ಕೆಲ ದಿನಗಳ ಹಿಂದೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮಿತ್ತೂರು ಸಮೀಪದ ಸೂರ್ಯ ನಿವಾಸಿ ಲಿಂಗಪ್ಪ ಗೌಡರ ಪುತ್ರಿ, ವಿವೇಕಾನಂದ ಕಾಲೇಜಿನ ಪದವಿ ವಿದ್ಯಾರ್ಥಿನಿ ಮಂಜುಶ್ರೀ (20) ಮೃತ ಯುವತಿ.

ಕೆಲ ಸಮಯಗಳ ಹಿಂದೆ ಕಬಕ ಸಮೀಪದ ಕೂವೆತ್ತಿಲದಲ್ಲಿ ಆಲ್ಟೋ ಕಾರು ಹಾಗೂ ಆಕ್ಟಿವಾ ನಡುವೆ ನಡೆದ ಅಪಘಾತದಲ್ಲಿ ಮಂಜುಶ್ರೀ ಗಂಭೀರ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ ವೇಳೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಮೃತರು ಮನೆಯವರು ಹಾಗೂ ಬಂಧು-ಮಿತ್ರರನ್ನು ಅಗಲಿದ್ದಾರೆ.

- Advertisement -

Related news

error: Content is protected !!