Friday, June 5, 2026
spot_imgspot_img
spot_imgspot_img

ಅಬ್ಬಿ ಫಾಲ್ಸ್ ಬಳಿ ಸೆಲ್ಫಿ ಕ್ರೇಜ್‌ಗೆ ಯುವಕ ಬಲಿ

- Advertisement -
- Advertisement -

ಫಾಲ್ಸ್‌ ಬಳಿ ಸೆಲ್ಫಿ ತೆಗೆದುಕೊಳ್ಳಲು ಹೋದಾಗ ಕಾಲು ಜಾರಿ ಬಿದ್ದು ಪ್ರವಾಸಿಗ ಬಲಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಸಮೀಪದ ಅಬ್ಬಿ ಜಲಪಾತದ ಬಳಿ ನಡೆದಿದೆ.

ಬಳ್ಳಾರಿ ಮೂಲದ ವಿನೋದ್ (26) ಮೃತ ಯುವಕ.

ಬೆಂಗಳೂರಿನಿಂದ ಪ್ರವಾಸಕ್ಕೆಂದು 12 ಯುವಕರ ತಂಡ ಅಬ್ಬಿ ಫಾಲ್ಸ್‌ಗೆ ಬಂದಿತ್ತು. ಈ ವೇಳೆ ಜಲಪಾತ ಬಳಿ ನಿಂತು ಯುವಕ ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಕಾಲು ಜಾರಿ ಬಿದ್ದು ನೀರು ಪಾಲಾಗಿದ್ದಾನೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ, ಮೃತ ದೇಹಕ್ಕಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

- Advertisement -

Related news

error: Content is protected !!