- Advertisement -
- Advertisement -
ಮುಂಬೈ : ಮಹಾರಾಷ್ಟ್ರ ಮುಂಬೈನಲ್ಲಿ ಕೊರೊನಾ ಸೋಂಕು ಅಟ್ಟಹಾಸ ಮೆರೆಯುತ್ತಿದ್ದು, ಇದೀಗ ಬಾಲಿವುಡ್ ಬಿಗ್‌ಬಿ ಅಮಿತಾಬ್ ಬಚ್ಚನ್ ಹಾಗು ಪುತ್ರ ಅಭಿಷೇಕ ಬಚ್ಚನ್‌ಗೆ ಕೊರೊನಾ ಸೋಂಕು ಇರುವುದು ಧೃಡವಾಗಿದೆ.ಈ ಬಗ್ಗೆ ಟ್ವೀಟ್ ಮಾಡಿರುವ ಅಭಿಷೇಕ್ ಬಚ್ಚನ್, ನಮ್ಮ ತಂದೆ ಮತ್ತು ನನಗೆ ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದವು. ತಪಾಸಣೆಗೆ ಒಳಗಾದಾಗ ಸೋಂಕು ತಗುಲಿರೋದು ದೃಢಪಟ್ಟಿದೆ.
ನಾವು ಆಸ್ಪತ್ರೆಗೆ ದಾಖಲಾಗಿದ್ದೇವೆ. ಪ್ರಾಥಮಿಕ ಸಂಪರ್ಕಕ್ಕೆ ಬಂದ ನನ್ನ ಕುಟುಂಬಸ್ಥರು ಹಾಗೂ ಸಿಬ್ಬಂದಿ ಕೊರೊನಾ ತಪಾಸಣೆಗೆ ಒಳಗಾಗಿದ್ದಾರೆ ಅಂತಾ ಅಭಿಷೇಕ್ ಹೇಳಿದ್ದಾರೆ.ಅಮಿತಾಭ್ ಬಚ್ಚನ್ ಪತ್ನಿ ಜಯಾ ಬಚ್ಚನ್ ಹಾಗು ಸೊಸೆ ಐಶ್ವರ್ಯ ರೈ ಮತ್ತು ಪುತ್ರಿ ಆರಾಧ್ಯ ಕೂಡಾ ಕೊರೊನಾ ತಪಾಸಣೆಗೆ ಒಳಗಾಗಿದ್ದರು. ಇದೀಗ ಅವರ ತಪಾಸಣಾ ವರದಿ ನೆಗೆಟಿವ್ ಬಂದಿದೆ.
- Advertisement -