

ಅಸಹಜ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಹೋದರ, ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ಹಾಸನದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಿನ್ನೆ ಹಾಸನದ ಸೆನ್ ಪೊಲೀಸ್ ಠಾಣೆಗೆ ಕರೆತಂದಿದ್ದ ಪೊಲೀಸರು ಇಂದು ಮುಂಜನೆ ನಾಲ್ಕು ಗಂಟೆಯವರೆಗೂ ಸುಧೀರ್ಘ ವಿಚಾರಣೆ ನಡೆಸಿದ್ದಾರೆ.ವಿಚಾರಣೆ ಬಳಿಕ ಸೂರಜ್ ರೇವಣ್ಣನನ್ನು ಬಂಧಿಸಿದರು. ವಿಚಾರಣೆಗಾಗಿ ಸರ್ಕಾರ ಸಕಲೇಶಪುರ ಡಿವೈಎಸ್ಪಿ ನೇಮಿಸಿದ್ದಾರೆ. ವಿಚಾರಣೆ ಬಳಿಕ ಸೂರಜ್ ರೇವಣ್ಣ ಅವರನ್ನು ತನಿಖಾಧಿಕಾರಿ ಪ್ರಮೋದ್ ಕುಮಾರ್ ಬಂಧಿಸಿದ್ದಾರೆ.
ಶನಿವಾರ ಸಂತ್ರಸ್ತ ನೀಡಿದ್ದ ದೂರು ಆಧರಿಸಿ ಹೊಳೆನರಸೀಪುರ ಗ್ರಾಮಾಂತ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 377 (ಅಸ್ವಾಭಾವಿಕ ಅಪರಾಧ), 342 (ತಪ್ಪಾದ ಬಂಧನಕ್ಕೆ ಶಿಕ್ಷೆ) ಹಾಗೂ 506 (ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಡಿಜಿಪಿ ಕಚೇರಿಯಲ್ಲಿ ದೂರು ನೀಡಿದ್ದ ಸಂತ್ರಸ್ತ ಹಾಸನ ಎಸ್ಪಿಗೂ ದೂರಿನ ಪ್ರತಿಯನ್ನು ಮೇಲ್ ಮಾಡಿದ್ದರು.
ಸೂರಜ್ ರೇವಣ್ಣ ಅವರು ತಮ್ಮ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಅರಕಲಗೂಡು ಮೂಲದ ಜೆಡಿಎಸ್ ಕಾರ್ಯಕರ್ತರೊಬ್ಬರು ಶನಿವಾರ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ದೂರಿನನ್ವಯ ಸೂರಜ್ ವಿರುದ್ಧ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ.








