Monday, April 29, 2024
spot_imgspot_img
spot_imgspot_img

ಮಂಗಳೂರು : ಮಂಗಳೂರು ವಿವಿಯಲ್ಲಿ ಡಾ.ಶಂಸುಲ್ ಇಸ್ಲಾಂ ಉಪನ್ಯಾಸಕ್ಕೆ ಎಬಿವಿಪಿ ವಿರೋಧ

- Advertisement -G L Acharya panikkar
- Advertisement -

ಮಂಗಳೂರು : ಪರೀಕ್ಷಾ ಫಲಿತಾಂಶ, ಉಪನ್ಯಾಸಕರ ವಿಚಾರದಲ್ಲಿ ಸದಾ ಸುದ್ದಿಯಲ್ಲಿರುವ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಕೋಮು ವಿಚಾರವಾಗಿಯೂ ವಿವಾದ ನಡೆಯುತ್ತಿದ್ದು, ಇತ್ತೀಚೆಗಷ್ಟೇ ಕಾಲೇಜು ಕಾರ್ಯಕ್ರಮಕ್ಕೆ ಹಿಂದೂ ಮುಖಂಡನಿಗೆ ಆತಿಥ್ಯಕ್ಕೆ ಎನ್ಎಸ್​ಯುಐ ವಿರೋಧ ವ್ಯಕ್ತಪಡಿಸಿತ್ತು. ಇದೀಗ ಹೊಸದಿಲ್ಲಿ ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರದ ನಿವೃತ್ತ ಸಹ ಪ್ರಾಧ್ಯಾಪಕ, ಸಂಶೋಧಕ, ಲೇಖಕ ಹಾಗೂ ಜನಕಲಾ ಸಂಘಟಕ ಡಾ. ಶಂಸುಲ್ ಇಸ್ಲಾಂ ಅವರು ‘ಮೊದಲ ಸ್ವಾತಂತ್ರ್ಯ ಸಂಗ್ರಾಮ, 1857 – ಜಂಟಿ ಬಲಿದಾನಗಳು, ಜಂಟಿ ವಾರಿಸುದಾರಿಕೆ’ ಎಂಬ ವಿಷಯದಲ್ಲಿ ಉಪನ್ಯಾಸ ನೀಡಲು ಆಗಮಿಸಿದ್ದು, ಎಬಿವಿಪಿ ಕಾರ್ಯಕರ್ತರು ‘ಗೋಬ್ಯಾಕ್ ಶಂಸುಲ್’ ಎಂದು‌ ವಿರೋಧ ವ್ಯಕ್ತಪಡಿಸಿದ್ದಾರೆ.

ಶಂಸುಲ್ ಇಸ್ಲಾಂ ಉಪನ್ಯಾಸ ವಿರೋಧಿಸಿ ಎಬಿವಿಪಿ ಕಾರ್ಯಕರ್ತರು ಕಾಲೇಜಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಈ ವೇಳೆ ಪೊಲೀಸರು ಮತ್ತು ಎಬಿವಿಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ವಿವಾದದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ವಿವಿ ಕಾಲೇಜು ಕಾರ್ಯಕ್ರಮವನ್ನು ಮುಂದೂಡಿದೆ.

- Advertisement -

Related news

error: Content is protected !!