Tuesday, May 7, 2024
spot_imgspot_img
spot_imgspot_img

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ವತಿಯಿಂದ ವಿವೇಕಾನಂದರ ಜಯಂತಿಯ ಪ್ರಯುಕ್ತ “ವಿವೇಕಾ ಸಂದೇಶ 2021”

- Advertisement -G L Acharya panikkar
- Advertisement -

ಬಂಟ್ವಾಳ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಬಂಟ್ವಾಳ ಇದರ ಸಹಯೋಗದಲ್ಲಿ ಕಾಮಾಜೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ವಿವೇಕಾನಂದರ 158ನೇ ಜಯಂತಿಯ ಪ್ರಯುಕ್ತ “ವಿವೇಕಾ ಸಂದೇಶ 2021” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಮುಖ್ಯ ಅತಿಥಿಗಳಾಗಿ ಮಾತಾನಾಡಿದ ನಗರದ ಪ್ರಸಿದ್ಧ ವಕೀಲರಾದ ಪ್ರಸಾದ್ ಕುಮಾರ್ ರೈ ಅಧ್ಯಯನ ಶೀಲ ಕ್ರಾಂತಿಕಾರಿ ಸನ್ಯಾಸಿ ಸ್ವಾಮಿ ವಿವೇಕಾನಂದರು ಕೆಲವೇ ವರ್ಷ ಬದುಕಿದ್ದರೂ ಕೂಡಾ, ಬಹಳಷ್ಟು ಚಿಂತನೆಗಳನ್ನು ಈ ದೇಶದ ಜನರಿಗೆ ನೀಡಿದ್ದಾರೆ, ವಿದ್ಯಾರ್ಥಿಗಳು ವಿವೇಕಾನಂದರ ಚಿಂತನೆಗಳನ್ನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಗಿರೀಶ್ ಭಟ್ ಮಾತನಾಡಿ ಇಂತಹ ಕಾರ್ಯಕ್ರಮಗಳು ವಿವೇಕಾನಂದರ ಬಗ್ಗೆ ಮತ್ತಷ್ಟು ತಿಳಿಯಲು ಸಹಕಾರಿಯಾಗಿದೆ ಎಂದರು. ಕಾರ್ಯಕ್ರಮದಲ್ಲಿ ಎಬಿವಿಪಿ ಬಂಟ್ವಾಳ ನಗರ ಕಾರ್ಯದರ್ಶಿ ನಾಗರಾಜ್ ಶೆಣೈ ಉಪಸ್ಥಿತರಿದ್ದರು.

ವಿದ್ಯಾರ್ಥಿ ಪರಿಷತ್ ನ ವತಿಯಿಂದ ಹಮ್ಮಿಕೊಂಡಿದ್ದ ಸ್ಪರ್ಧೆಯ ವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಪರಿಷತ್ ನ ಪ್ರಮುಖರು ಹಾಗೂ ಕಾಲೇಜಿನ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಾಧ್ಯಾಪಕರಾದ ಶಶಿಕಲಾ ಸ್ವಾಗತಿಸಿ, ವಿದ್ಯಾರ್ಥಿನಿ ಬಿಂಧು ವಂದಿಸಿದರು, ಸುಶ್ಮಿತಾ ಕಾರ್ಯಕ್ರಮವನ್ನು ನಿರೂಪಿಸಿದರು.

- Advertisement -

Related news

error: Content is protected !!