- Advertisement -
- Advertisement -
ಸವಾರ ಗಂಭೀರ



ವಿಟ್ಲ :ಅತೀ ವೇಗವಾಗಿ ಬಂದ ಖಾಸಗಿ ಬಸ್ ಬೈಕ್ ಗೆ ಡಿಕ್ಕಿ ಹೊಡೆದು ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲ ಚಂದಳಿಕೆಯಲ್ಲಿ ನಡೆದಿದೆ.ಪೂರ್ಣಿಮಾ ಹೆಸರಿನ ಖಾಸಗಿ ಬಸ್ ಮಿತಿ ಮೀರಿದ ವೇಗದಲ್ಲಿ ಓವರ್ ಟೇಕ್ ಮಾಡುವ ಭರದಲ್ಲಿ ಚಲಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಗಂಭೀರ ಗಾಯ ಗೊಂಡಿದ್ದಾರೆ. ಗಾಯಾಳುವನ್ನು ಪೆರುವಾಯಿ ನಿವಾಸಿ ಅರ್ಚಕ ಹರ್ಷ ಭಟ್ ಎಂದು ಗುರುತಿಸಲಾಗಿದೆ. ಗಾಯಳುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -








