- Advertisement -
- Advertisement -





ಬೆಳ್ತಂಗಡಿ: ಧರ್ಮಸ್ಥಳ-ಉಜಿರೆ ರಸ್ತೆಯ ಕನ್ಯಾಡಿ ಬಳಿ ಕಾರು ಮತ್ತು ರಿಕ್ಷಾ ನಡುವೆ ಅಪಘಾತ ನಡೆದ ಘಟನೆ ಫೆ. 15ರಂದು ಸಂಜೆ ನಡೆದಿದೆ.ಧರ್ಮಸ್ಥಳದಿಂದ ಉಜಿರೆ ಕಡೆಗೆ ಪ್ರಯಾಣಿಸುತ್ತಿದ್ದ ಆಟೋ ಹಾಗೂ ಉಜಿರೆಯಿಂದ ಧರ್ಮಸ್ಥಳ ಕಡೆಗೆ ಪ್ರಯಾಣಿಸುತ್ತಿದ್ದ ಬೆಂಗಳೂರು ಮೂಲದ ಕಾರಿನ ನಡುವೆ ಅಪಘಾತ ಸಂಭವಿಸಿ ರಿಕ್ಷಾ ಚಾಲಕ ಅನಿಲ್ ಅವರಿಗೆ ತಲೆ ಭಾಗಕ್ಕೆ ಗಂಭೀರ ಗಾಯವಾಗಿದ್ದು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಿಕ್ಷಾದಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಬೆಂಗಳೂರು ಮೂಲದ ಕಾರಿನಲ್ಲಿ ಕುಟುಂಬದ ಸದಸ್ಯರೊಂದಿಗೆ ಪ್ರಯಾಣಿಸುತ್ತಿದ್ದ ಕಾರು ಅಪಘಾತದ ರಭಸಕ್ಕೆ ರಸ್ತೆ ಬದಿ ಮಗುಚಿ ಬಿದ್ದಿದೆ. ಸ್ಥಳೀಯರು ಕಾರು ಪ್ರಯಾಣಿಕರನ್ನು ರಕ್ಷಣೆ ಮಾಡಿದ್ದಾರೆ.ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದ ರಭಸಕ್ಕೆ ಕಾರು ಹಾಗೂ ರಿಕ್ಷಾಕ್ಕೆ ಸಂಪೂರ್ಣ ಹಾನಿಯಾಗಿದೆ.
- Advertisement -








