Tuesday, July 28, 2026
spot_imgspot_img
spot_imgspot_img

ಖಾಸಗಿ ಬಸ್-ಸ್ಕೂಟರ್‌ ಅಪಘಾತ: ಟೈಲರ್‌ ಸಾವು

- Advertisement -
- Advertisement -

ಬೆಂಗಳೂರು: ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಖಾಸಗಿ ಬಸ್ ಹಾಗೂ ಸ್ಕೂಟರ್‌ ಮಧ್ಯೆ ಡಿಕ್ಕಿ ಸಂಭವಿಸಿ ಟೈಲರ್‌ ಮೃತಪಟ್ಟಿದ್ದಾರೆ. ಬೊಮ್ಮನಹಳ್ಳಿ ನಿವಾಸಿ ಶಂಕರ್‌ (45) ಮೃತಪಟ್ಟವರು.ಶನಿವಾರ ರಾತ್ರಿ 8ರ ಸುಮಾರಿಗೆ ಶಂಕರ್ ಅವರು ಕನಕಪುರ ರಸ್ತೆಯ ಶ್ರೀನಿವಾಸ್‌ ಮೆಡಿಕಲ್‌ ಸ್ಟೋರ್‌ ಎದುರು ಸ್ಕೂಟರ್‌ನಲ್ಲಿ ತೆರಳುತ್ತಿದ್ದರು.ಹಿಂದಿನಿಂದ ಖಾಸಗಿ ಬಸ್‌, ಸ್ಕೂಟರ್‌ಗೆ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಸ್ಕೂಟರ್‌ನಿಂದ ಕೆಳಕ್ಕೆ ಬಿದ್ದಿದ್ದ ಅವರು, ಗಂಭೀರವಾಗಿ ಗಾಯಗೊಂಡಿದ್ದರು. ಸ್ಥಳೀಯರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ’ ಎಂದು ಮೂಲಗಳು ತಿಳಿಸಿವೆ.’ಖಾಸಗಿ ಬಸ್‌ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವಾಗಿದೆ. ಬಸ್‌ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಸಂಚಾರ ಪೊಲೀಸರು ಹೇಳಿದರು.

- Advertisement -

Related news

error: Content is protected !!