Monday, June 8, 2026
spot_imgspot_img
spot_imgspot_img

ಕಬಕ: ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಮೃತ್ಯು

- Advertisement -
- Advertisement -

ಪುತ್ತೂರು: ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್‌ ಸವಾರ ಮೃತಪಟ್ಟ ಘಟನೆ ಕಬಕದಲ್ಲಿ ನಡೆದಿದೆ.ಇನ್ನೋರ್ವ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

ಪುತ್ತೂರಿನಿಂದ ಮಂಗಳೂರಿನ ಕಡೆಗೆ ಹೋಗುತ್ತಿದ್ದ KSRTC ಬಸ್ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರೂ ಸವಾರರು ಗಂಭೀರವಾಗಿ ಗಾಯಗೊಂಡಿದ್ದರು.ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಗಾಯಾಳುಗಳಲ್ಲಿ ಓರ್ವನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಕೊನೆಯುಸಿರೆಳೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮೃತಪಟ್ಟ ಹಾಗೂ ಗಾಯಗೊಂಡ ಸವಾರರಿಬ್ಬರೂ ಬಂಟ್ವಾಳ ತಾಲ್ಲೂಕಿನ ನರಿಕೊಂಬು ಗ್ರಾಮದವರೆಂದು ತಿಳಿದುಬಂದಿದೆ. ಅಪಘಾತದ ಪರಿಣಾಮವಾಗಿ ಮಾಣಿ-ಮೈಸೂರು ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿ, ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳು ಕಿಲೋಮೀಟರ್‌ಗಟ್ಟಲೆ ಸಾಲುಗಟ್ಟಿ ನಿಂತಿದ್ದವು.

- Advertisement -

Related news

error: Content is protected !!