Monday, June 8, 2026
spot_imgspot_img
spot_imgspot_img

ಕುಂದಾಪುರ: ಸ್ಕೂಟರ್‌ಗೆ ಲಾರಿ ಡಿಕ್ಕಿ; ದಂಪತಿಗೆ ಗಂಭೀರ ಗಾಯ..!

- Advertisement -
- Advertisement -

ಕುಂದಾಪುರ: ಜೂನ್ 15 ರಂದು ಹಾರ್ದಳ್ಳಿ ಮಂಡಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರಾಜ್ಯ ಹೆದ್ದಾರಿಯ ಜನ್ನಾಡಿ ಪ್ರದೇಶದಲ್ಲಿ ಲಾರಿಯೊಂದು ಸ್ಕೂಟರ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ದಂಪತಿಗಳು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಗಂಭೀರ ಗಾಯಗೊಂಡವರನ್ನು ನರಸಿಂಹ ಮರಕಲ್ (52) ಮತ್ತು ಬಾಬಿ (46) ಎಂದು ಗುರುತಿಸಲಾಗಿದೆ.

ಅವರು ಉಲ್ಲೂರು 74 ರಿಂದ ಕೊರ್ಗಿ ಕಡೆಗೆ ತಮ್ಮ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಚಿತ್ರದುರ್ಗದಿಂದ ಉಡುಪಿಗೆ ಟೈಲ್ಸ್ ಸಾಗಿಸುತ್ತಿದ್ದ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದಿದೆ.

ದಂಪತಿಗಳ ತಲೆ ಮತ್ತು ಕೈಕಾಲುಗಳಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಕೋಟೇಶ್ವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕೊರ್ಗಿ ಗ್ರಾಮ ಪಂಚಾಯತ್‌ನ ಸಿಬ್ಬಂದಿ ಮತ್ತು ಗಾಯಾಳುಗಳ ಸಂಬಂಧಿ ಗಣೇಶ್ ಮರಕಲ್ ತಿಳಿಸಿದ್ದಾರೆ. ಅಪಘಾತದಲ್ಲಿ ಸ್ಕೂಟರ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!