Tuesday, July 21, 2026
spot_imgspot_img
spot_imgspot_img

ಬಾಂಗ್ಲಾದಲ್ಲಿ ಕೂಲಿ ಕಾರ್ಮಿಕರನ್ನ ಕರೆದೊಯ್ಯುತ್ತಿದ್ದ ಟ್ರಕ್ ಪಲ್ಟಿ; 15 ಸಾವು, 10 ಮಂದಿಗೆ ಗಾಯ

- Advertisement -
- Advertisement -

ಢಾಕಾ: ಬಾಂಗ್ಲಾದೇಶದಲ್ಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಪಲ್ಟಿಯಾಗಿ 15 ಮಂದಿ ಸಾವನ್ನಪ್ಪಿ, 10 ಮಂದಿ ಗಾಯಗೊಂಡಿರುವ ಘಟನೆ ವರದಿಯಾಗಿದೆ.

ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ವಾಯುವ್ಯಕ್ಕೆ ಸುಮಾರು 83 ಕಿಲೋಮೀಟರ್ ದೂರದಲ್ಲಿರುವ ತಂಗೈಲ್ ಜಿಲ್ಲೆಯ ಸೊರಾಟೊಯಿಲ್ ಹೆದ್ದಾರಿಯಲ್ಲಿ ಸೋಮವಾರ ಮುಂಜಾನೆ 5 ಗಂಟೆ ಸುಮಾರಿಗೆ ಈ ಅಪಘಾತ ನಡೆದಿದೆ. ಘಟನೆಯಲ್ಲಿ ಸಾವನ್ನಪ್ಪಿದ 15 ದಿನಗೂಲಿ ಕಾರ್ಮಿಕರು ಈದ್ ಅಲ್-ಅಧಾ ಆಚರಣೆಗಾಗಿ ತಮ್ಮ ಕುಟುಂಬಗಳನ್ನು ಸೇರಲು ತಾಯ್ನಾಡಿಗೆ ಹೊರಟಿದ್ದರು.

ಕಬ್ಬಿಣದ ಸರಳುಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಒಂದರಲ್ಲಿ ಹಬ್ಬದ ರಜೆಗೆ ಮನೆಗೆ ಮರಳುತ್ತಿದ್ದ ಪ್ರಯಾಣಿಕರು ‘ಹಿಚ್‌ಹೈಕಿಂಗ್’ (ಲಿಫ್ಟ್ ಪಡೆದು) ಮೂಲಕ ಪ್ರಯಾಣಿಸುತ್ತಿದ್ದರು. ಈ ಟ್ರಕ್ ಢಾಕಾದಿಂದ ಉತ್ತರ ಪ್ರಾಂತ್ಯಗಳ ಕಡೆಗೆ ಚಲಿಸುತ್ತಿದ್ದಾಗ, ಸೊರಾಟೊಯಿಲ್ ಹೆದ್ದಾರಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದೆ. ಕಬ್ಬಿಣದ ಸರಳುಗಳ ಭಾರ ಮತ್ತು ವಾಹನದ ಭೀಕರ ಅಪಘಾತದಿಂದಾಗಿ 15 ಜನರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ಪೊಲೀಸ್ ಅಧಿಕಾರಿ ಫುವಾದ್ ಹೊಸೈನ್ ಅವರು ಮಾಹಿತಿ ನೀಡಿದ್ದಾರೆ.

ಸೋಮವಾರ ಮುಂಜಾನೆ ಭೀಕರ ಶಬ್ದ ಕೇಳುತ್ತಿದ್ದಂತೆ ಸ್ಥಳೀಯ ನಿವಾಸಿಗಳು ಅಪಘಾತದ ಸ್ಥಳಕ್ಕೆ ಆಗಮಿಸಿ ತಕ್ಷಣವೇ ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ. ಗಾಯಗೊಂಡಿರುವ 10 ಕ್ಕೂ ಹೆಚ್ಚು ಜನರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಸದ್ಯ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!