- Advertisement -
- Advertisement -





ವಿಜಯಪುರ: ಅಂತ್ಯಕ್ರಿಯೆ ಮುಗಿಸಿ ವಾಪಸ್ ಆಗ್ತಿದ್ದಾಗ ಗೂಡ್ಸ್ ವಾಹನ ಪಲ್ಟಿಯಾಗಿ 30 ಜನರು ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಯಂಕಂಚಿ ಗ್ರಾಮದ ಬಳಿ ಘಟನೆ ನಡೆದಿದೆ.
ಅಂತ್ಯಕ್ರಿಯೆ ಹಿನ್ನೆಲೆ ಒಂದೇ ಕುಟುಂಬದ 30 ಜನರು ಗೂಡ್ಸ್ ವಾಹನದಲ್ಲಿ ಕೊಂಡಗುಳಿ ಗ್ರಾಮಕ್ಕೆ ತೆರಳಿದ್ದರು. ಈ ವೇಳೆ ಯಂಕಂಚಿ ಗ್ರಾಮದ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಪಲ್ಟಿಯಾಗಿದೆ. ಪರಿಣಾಮ 30 ಜನರು ಗಾಯಗೊಂಡಿದ್ದಾರೆ. ಈ ಪೈಕಿ 10 ಜನರಿಗೆ ಗಂಭೀರ ಗಾಯವಾಗಿದ್ದು, ಸಿಂದಗಿ ತಾಲೂಕಾಸ್ಪತ್ರೆ ಹಾಗೂ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಸಂಬಂಧ ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
- Advertisement -








