- Advertisement -
- Advertisement -





ನೆಲಮಂಗಲ: ಕೆಲಸ ಮಗಿಸಿ ವಾಪಸ್ ಆಗುವಾಗ ಸಂಭವಿಸಿದ ಅಪಘಾತದಲ್ಲಿ ಯುವಕ ಸಾವನ್ನಪ್ಪಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಲಕ್ಕೆನಹಳ್ಳಿಯಲ್ಲಿ ನಡೆದಿದೆ.
ನೆಲಮಂಗಲ ತಾಲೂಕಿನ ಬಾಣಸವಾಡಿ ನಿವಾಸಿ ನರಸಿಂಹ ಮೂರ್ತಿ (27) ಮೃತ ಯುವಕ. ಮಾಕಳಿಯಲ್ಲಿನ ವೇರ್ ಹೌಸ್‌ನಲ್ಲಿ ಕೆಲಸ ಮುಗಿಸಿ ಬೈಕ್‌ನಲ್ಲಿ ವಾಪಸ್ ಆಗುವಾಗ ಈ ಅಪಘಾತ ಸಂಭವಿಸಿದೆ. ಹಿಟ್ ಅಂಡ್ ರನ್‌ಗೆ ಯುವಕ ಬಲಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಸಂಬಂಧ ಚಿಕ್ಕಬಾಣಾವರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








