- Advertisement -
- Advertisement -
ವಿಟ್ಲ : ಬೈಕ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲದ ಬೊಬ್ಬೆಕೇರಿ ಶಾಂತಿನಗರದಲ್ಲಿ ನಡೆದಿದೆ.

ಗಾಯಗೊಂಡ ಬೈಕ್ ಸವಾರನನ್ನು ವಿಟ್ಲ ಸಮೀಪದ ನೀರಕಣಿ ನಿವಾಸಿ ಮಹಮ್ಮದ್ ಮುಝಂಬಿಲ್ ಎಂದು ಗುರುತಿಸಲಾಗಿದೆ. ಅವರು ಮಂಗಳೂರಿನ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಮಂಗಳೂರು ಕಡೆಯಿಂದ ವಿಟ್ಲ ಕಡೆಗೆ ಬರುತ್ತಿದ್ದ ವೇಳೆ, ವಿಟ್ಲ ಕಡೆಯಿಂದ ಬಂದ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಮುಝಂಬಿಲ್ ಅವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
- Advertisement -








