- Advertisement -
- Advertisement -
ಮಂಗಳೂರು: ಖಾಸಗಿ ಎಕ್ಸ್‌ಪ್ರೆಸ್ ಬಸ್ ಮತ್ತು ಆಟೊ ರಿಕ್ಷಾ ನಡುವೆ ಮುಖಾಮುಖಿ ಅಪಘಾತ ನಡೆದು ರಿಕ್ಷಾ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಆಟೊದಲ್ಲಿದ್ದ ಇಬ್ಬರಿಗೆ ಗಾಯಗಳಾಗಿರುವ ಘಟನೆ ವಾಮಂಜೂರು ಸಮೀಪದ ಕೆತ್ತಿಕಲ್ ಎಂಬಲ್ಲಿ ಶುಕ್ರವಾರ ಸಂಜೆ ವರದಿಯಾಗಿದೆ.

ಮಂಗಳೂರಿನಿಂದ ಮೂಡುಬಿದಿರೆಗೆ ತೆರಳುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್ ಬಸ್ ಕೆತ್ತಿಕಲ್ ಬಳಿ ಆಟೊ ರಿಕ್ಷಾಕ್ಕೆ ಢಿಕ್ಕಿ ಹೊಡೆಯಿತೆನ್ನಲಾಗಿದೆ. ಅಪಘಾತದ ರಭಸಕ್ಕೆ ರಿಕ್ಷಾದ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕ ಗಂಭೀರ ಗಾಯಗೊಂಡಿದ್ದು, ಇಬ್ಬರು ಪ್ರಯಾಣಿಕರಿಗೂ ಗಾಯಗಳಾಗಿವೆ. ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.ಸ್ಥಳೀಯರು ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
- Advertisement -








