Friday, June 5, 2026
spot_imgspot_img
spot_imgspot_img

ಬಂಟ್ವಾಳ : ಅಂಬುಲೆನ್ಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿ

- Advertisement -
- Advertisement -

ಬಂಟ್ವಾಳ : ಅಂಬುಲೆನ್ಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ ವಾಹನಗಳೆರಡು ಜಖಂಗೊಂಡ ಘಟನೆ ಮಾಣಿ – ಮೈಸೂರು ಹೆದ್ದಾರಿಯ ನೇರಳಕಟ್ಟೆ ಸಮೀಪದ ಭಗವಂತಕೋಡಿ ಎಂಬಲ್ಲಿ ಮಂಗಳವಾರ ರಾತ್ರಿ 8 ರ ವೇಳೆಗೆ ನಡೆದಿದೆ.

ಪುತ್ತೂರಿನಿಂದ ಮಂಗಳೂರಿನ ಆಸ್ಪತ್ರೆಗೆ ರೋಗಿಯೋರ್ವರನ್ನು ಕರೆದುಕೊಂಡು ಹೋಗುತ್ತಿದ್ದ ಅಂಬುಲೆನ್ಸ್ ಹಾಗೂ ಮಾಣಿ ಕಡೆಯಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಇಂಡಿಕಾ ಕಾರು ಮುಖಾಮುಖಿ ಡಿಕ್ಕಿ ಹೊಡೆದಿದೆ.

ಅಪಘಾತದಿಂದ ಯಾವುದೇ ಜೀವ ಹಾನಿಯಾಗಿಲ್ಲ, ವಾಹನಗಳೆರಡು ಜಖಂಗೊಂಡಿದೆ.
ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

- Advertisement -

Related news

error: Content is protected !!