Sunday, June 29, 2025
spot_imgspot_img
spot_imgspot_img

ರಸ್ತೆ ಮಧ್ಯ ಇದ್ದ ಹಸುವಿಗೆ ಬೈಕ್ ಢಿಕ್ಕಿ- ಬೈಕ್ ಸವಾರರ ಮೇಲೆ ಹರಿದ ಲಾರಿ

- Advertisement -
- Advertisement -

ರಸ್ತೆ ಮಧ್ಯ ಇದ್ದ ಹಸುವಿಗೆ ಬೈಕ್ ಢಿಕ್ಕಿಯಾಗಿ ಕೆಳಗೆ ಬಿದ್ದ ಬೈಕ್ ಸವಾರರ ಮೇಲೆ ಗ್ಯಾಸ್ ಲಾರಿ ಹರಿದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಬಸ್ ಡಿಪೋ ಬಳಿ ನಡೆದಿದೆ.

ಲಾರಿ ಚಕ್ರದಡಿಗೆ ಸಿಲುಕಿದ ಪರಿಣಾಮವಾಗಿ ವಿಶ್ವೇಂದ್ರ (43) ಎಂಬ ದುರ್ದೈವಿ ಛಿದ್ರ-ಛಿದ್ರವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಭೀಕರ ಅಪಘಾತ ನಡೆದಿದ್ದು, ಬೈಕ್ ಹಿಂಬದಿ ಸವಾರೆಯಾಗಿದ್ದ ಲಕ್ಷ್ಮೀಣಿ ಎಂಬ ಮಹಿಳೆಯ ಕಾಲು ತುಂಡಾಗಿದ್ದು ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಇಬ್ಬರೂ ಕೊಪ್ಪ ತಾಲೂಕಿನ ಜಯಪುರ ಸಮೀಪದ ಕಲ್ಕೆರೆ ಗ್ರಾಮದವರು ಎಂದು ತಿಳಿದು ಬಂದಿದೆ. ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!