Sunday, August 2, 2026
spot_imgspot_img
spot_imgspot_img

ಬಂಟ್ವಾಳ : ಬೈಕ್ ಡಿಕ್ಕಿ – ಬೈಕ್ ಸವಾರ ಹಾಗೂ ಪಾದಚಾರಿ ವ್ಯಕ್ತಿ ಗೆ ಗಂಭೀರ ಗಾಯ

- Advertisement -
- Advertisement -

ಬಂಟ್ವಾಳ : ಬೈಕ್ ಡಿಕ್ಕಿ ಹೊಡೆದು ಪಾದಚಾರಿ ವ್ಯಕ್ತಿ ಹಾಗೂ ಬೈಕ್ ಸವಾರ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಪೊಯ್ಯೋಡಿ ಎಂಬಲ್ಲಿ ನಡೆದಿದೆ.

ಗಾಯಾಳುಗಳನ್ನು ಪಾದಚಾರಿ ವ್ಯಕ್ತಿ ರವಿ ಹಾಗೂ ಬೈಕ್ ಸವಾರ ಪ್ರಥಮ್ ಎಂದು ಗುರುತಿಲಾಗಿದೆ.
ಬೈಕ್ ಸವಾರ ಪ್ರಥಮ್ ಅವರು ನಾವೂರು ಗ್ರಾಮದ ಪೊಯೊಡಿ ಎಂಬಲ್ಲಿ ರಸ್ತೆ ಬದಿ ನಿಂತಿದ್ದ ರವಿ ಅವರಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಇಬ್ಬರನ್ನು ಸ್ಥಳೀಯರು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಪೈಕಿ ರವಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!