Saturday, June 13, 2026
spot_imgspot_img
spot_imgspot_img

ಬೆಳ್ತಂಗಡಿ: ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದು ಯುವ ಉದ್ಯಮಿ ಮೃತ್ಯು

- Advertisement -
- Advertisement -

ಬೆಳ್ತಂಗಡಿ; ಉಜಿರೆ ಮುಖ್ಯದ್ವಾರದಿಂದ ಕಾಲೇಜು ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಾಯಕ್ (35) ಎಂಬವರಾಗಿದ್ದಾರೆ.

ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಕಾಲೇಜು ರಸ್ತೆಯಿಂದ ಬೆಳ್ತಂಗಡಿ ಸಾಗುವ ಮಧ್ಯೆ ಡಿವೈಡರ್ ನ ಬೀದಿ ದೀಪದ ಕಂಬಗಳಿಗೆ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿ ರಭಸಕ್ಕೆ ಕಾರು ಮುಂಭಾಗ ನಜ್ಜು ಗುಜ್ಜಾದರೆ, ಒಂದು ವಿದ್ಯುತ್ ಕಂಬ ಬುಡ ಸಮೇತ ಕಿತ್ತು ಬಿದ್ದಿದೆ. ಅಪಘಾತ ರಭಸಕ್ಕೆ ಚಾಲಕ ಪ್ರಜ್ವಲ್ ತಲೆಗೆ ಗಂಭೀರ ಗಾಯವಾಗಿದ್ದು, ಆತನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ.

- Advertisement -

Related news

error: Content is protected !!