Saturday, May 4, 2024
spot_imgspot_img
spot_imgspot_img

ಬಂಟ್ವಾಳ : ಕರೆಂಟ್ ಕಂಬಕ್ಕೆ ಗುದ್ದಿದ ಸರಕಾರಿ ಬಸ್ – ಪ್ರಯಾಣಿಕರು ಪಾರು

- Advertisement -G L Acharya panikkar
- Advertisement -

ಬಂಟ್ವಾಳ : ಓವರ್ ಟೇಕ್ ಮಾಡಲು ಹೋದ ಟೆಂಪೋ ರಿಕ್ಷಾವನ್ನು ಬಚಾವ್ ಮಾಡಲು ಹೋಗಿ ಕರೆಂಟ್ ಕಂಬಕ್ಕೆ ಸರಕಾರಿ ಬಸ್ ಗುದ್ದಿದ ಘಟನೆ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ.

ಟೆಂಪೋ ರಿಕ್ಷಾ ಚಾಲಕನೋರ್ವ ಆಕ್ಟಿವಾವನ್ನು ಓವರ್ ಟೇಕ್ ಮಾಡಲು ಹೋಗಿದ್ದು ಈ ಸಂದರ್ಭ ಮುಡಿಪು ಮಾರ್ಗವಾಗಿ ಬರುತ್ತಿದ್ದ ಕಾಸರಗೋಡು – ಬಿ.ಸಿ.ರೋಡ್ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕನು ಬಸ್ ತಿರುಗಿಸಿದ್ದು, ಈ ಸಂದರ್ಭ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬಸ್ ಗುದ್ದಿದ್ದ ರಭಸಕ್ಕೆ ಕರೆಂಟ್ ಕಂಬ ತುಂಡಾಗಿದ್ದು, ಬಸ್ಸಿನಲ್ಲಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೋಲಿಸರು ಆಗಮಿಸಿ, ಪರಿಶೀಲನೆ ನಡೆಸಿದರು.

- Advertisement -

Related news

error: Content is protected !!