- Advertisement -
- Advertisement -




ದಾವಣಗೆರೆ: ದಾವಣಗೆರೆ ನಗರದ ನೂತನ್ ಕಾಲೇಜುಮುಂಭಾಗ ಬೈಕ್ ಅಪಘಾತಕ್ಕೀಡಾಗಿ ಯುವಕನೊಬ್ಬ ಮೃತಪಟ್ಟ ಘಟನೆ ಮಂಗಳವಾರ ತಡರಾತ್ರಿ ಸಂಭವಿಸಿದೆ.ಮೃತ ಯುವಕ ನಿಟ್ಟುವಳ್ಳಿ ಹೊಸ ಬಡಾವಣೆಯ ಕಾರ್ತಿಕ್ (19) ಎಂದು ಗುರುತಿಸಲಾಗಿದೆ.ಘಟನೆಯಿಂದ ಮತ್ತೊಬ್ಬ ಯುವಕ ಗಂಭೀರ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದೆ.ಹೊಸ ವರ್ಷ ಸಂಭ್ರಮಾಚರಣೆಗೆ ಸ್ನೇಹಿತರ ಜೊತೆ ಯುವಕ ಆಗಮಿಸುತ್ತಿದ್ದ. ಬೈಕ್‌ನಲ್ಲಿ ವೇಗವಾಗಿ ಬರುತ್ತಿದ್ದಾಗ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದಿದ್ದಾನೆ.ಗಂಭೀರ ಗಾಯಗೊಂಡಿದ್ದರಿಂದ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.
- Advertisement -








