- Advertisement -
- Advertisement -




ಭಟ್ಕಳ: ಸ್ಕೂಟರ್ ಗೆ ಕಾರು ಡಿಕ್ಕಿಯಾಗಿ ತಂದೆ ಮತ್ತು ಮಗಳು ಗಂಭೀರ ಗಾಯಗೊಂಡ ಘಟನೆ ಭಟ್ಕಳ ಸಮೀಪದ ಶಿರೂರುನಲ್ಲಿ ನಡೆದಿದೆ.
ಸ್ಕೂಟರ್ ಸವಾರ ಭಟ್ಕಳದ ಮುಗಳಿಹೊಂಡದ ನಿವಾಸಿ ಇಸ್ಮಾಯಿಲ್ (57) ಎಂದು ಗುರುತಿಸಲಾಗಿದೆ.
ಇಸ್ಮಾಯಿಲ್ ಅವರು ತನ್ನ ಮಗಳು ಮತ್ತು ಇಬ್ಬರು ಮೊಮ್ಮಕ್ಕಳೊಂದಿಗೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ವಿರುದ್ಧ ದಿಕ್ಕಿನಿಂದ ಬಂದ ಕಾರು ಸ್ಕೂಟರ್ ಗೆ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ.
ಅಪಘಾತದಲ್ಲಿ ಇಸ್ಮಾಯಿಲ್ ಅವರ ತಲೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲಕ್ಕೆ ರವಾನಿಸಲಾಗಿದೆ. ಅವರ ಮಗಳಿಗೂ ಗಾಯಗಳಾಗಿದ್ದು, ಕುಂದಾಪುರ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಘಟನೆಯಲ್ಲಿ ಇಬ್ಬರು ಮೊಮ್ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
- Advertisement -