Sunday, June 14, 2026
spot_imgspot_img
spot_imgspot_img

ಬೈಕ್‌- ಕಾರು ನಡುವೆ ಅಪಘಾತ; ಇಬ್ಬರು ಸವಾರರು ಸಾವು..!

- Advertisement -
- Advertisement -

ರಾಯಚೂರು: ಬೈಕ್‌ ಮತ್ತು ಕಾರು ನಡುವಿನ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಮೃತಪಟ್ಟ ಘಟನೆ ಯರಗೇರಾ ಗ್ರಾಮದ ರಾಯಚೂರು ವಿಶ್ವವಿದ್ಯಾಲಯದ ಬಳಿ ನಡೆದಿದೆ.

ಮೃತಪಟ್ಟವರನ್ನು ಉರುಕುಂದ(42), ಲಕ್ಷ್ಮಣ(45) ಎಂದು ಗುರುತಿಸಲಾಗಿದೆ.

ಯರಗೇರಾ ಕಡೆ ಹೋಗುತ್ತಿದ್ದ ವೇಳೆ ಎದುರಿಗೆ ಬರುತ್ತಿದ್ದ ಕಾರಿಗೆ ಬೈಕ್ ಢಿಕ್ಕಿ ಹೊಡೆದಿದೆ. ಹೊಡೆತದ ರಭಸಕ್ಕೆ ಉರುಕುಂದ ಸ್ಥಳದಲ್ಲೆ ಮೃತಪಟ್ಟಿದ್ದು, ಲಕ್ಷ್ಮಣ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕಾರಿನ ಮುಂಭಾಗ ಜಖಂಗೊಂಡಿದ್ದು, ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನೆ ಬಗ್ಗೆ ಯರಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!