Monday, May 20, 2024
spot_imgspot_img
spot_imgspot_img

ಬೈಕ್-ಬಸ್ ನಡುವೆ ಅಪಘಾತ; ಬೈಕ್‌ ಸವಾರ ಸ್ಥಳದಲ್ಲೇ ಸಾವು..!

- Advertisement -G L Acharya panikkar
- Advertisement -

ಬೈಕ್ ಹಾಗೂ ಕೆಎಸ್​ಆರ್​ಟಿಸಿ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಬೈಕ್‌ ಸವಾರ ಸಾವನ್ನಪ್ಪಿರೋ ಘಟನೆ ಚನ್ನರಾಯಪಟ್ಟಣ ತಾಲೂಕಿನ ಬೇಡಿಗನಹಳ್ಳಿ ಸರ್ಕಲ್ ಬಳಿ ನಡೆದಿದೆ.

ಬೆಂಗಳೂರು ಕಡೆಯಿಂದ ಬರುತ್ತಿದ್ದ ಸಾರಿಗೆ ಬಸ್, ಬೈಕ್​ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಅಪಘಾತದ ಬಳಿಕ ಕೆ‌ಎಸ್‌ಆರ್‌ಟಿಸಿ ಬಸ್​ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಚಾಲಕ ರಸ್ತೆಯಲ್ಲೇ ಬಸ್ ಅನ್ನು ನಿಲ್ಲಿಸಿ ಪ್ರಯಾಣಿಕರನ್ನು ಬಸ್‌ನಿಂದ ಕೆಳಗಿಳಿದ್ದಾರೆ.

ಬೆಂಕಿಯ ಕೆನ್ನಾಲಿಗೆಗೆ ಕೆ‌ಎಸ್‌ಆರ್‌ಟಿಸಿ ಬಸ್ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ.

- Advertisement -

Related news

error: Content is protected !!