- Advertisement -
- Advertisement -




ಕಾರು ಹಾಗೂ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆ ಹೆಬ್ಬಾಳು ಬಡಾವಣೆ ನಿವಾಸಿ ರಾಧಾ (34) ಎಂಂದು ಗುರುತಿಸಲಾಗಿದೆ.
ಮೈಸೂರು ಕೆ.ಆರ್‘.ಎಸ್ ರಸ್ತೆಯಲ್ಲಿ ಈ ಭೀಕರ ಅಪಘಾತ ನಡೆದಿದೆ. ವೇಗವಾಗಿ ಬಂದ ಕಾರು ಸ್ಕೂಟಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ಹೊಡೆತಕ್ಕೆ ಕಾರು ನಡು ರಸ್ತೆಯಲ್ಲಿ ಪಲ್ಟಿ ಹೊಡೆದಿದೆ. ಮಾತ್ರವಲ್ಲ ಕಾರಿನ ಮುಂದಿನ ಟೈರ್ ಕಳಚಿ ಬಿದ್ದಿದೆ. ಅಲ್ಲದೇ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.
ಘಟನಾ ಸ್ಥಳಕ್ಕೆ ಮೈಸೂರಿನ ವಿವಿ ಪುರಂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕಾರು ಹಾಗೂ ಚಾಲಕನನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ. ಕಾರು ಚಾಲಕನ ವಿಚಾರಣೆಗೆ ಒಳಪಡಿಸಿದ್ದು, ಅಪಘಾತಕ್ಕೆ ಕಾರಣವನ್ನು ಪತ್ತೆ ಹಚ್ಚತ್ತಿದ್ದಾರೆ. ಇತ್ತ ಮೃತಳ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.
- Advertisement -