Saturday, June 28, 2025
spot_imgspot_img
spot_imgspot_img

ಕಾರುಗಳ ನಡುವೆ ಅಪಘಾತ; ಇಬ್ಬರು ಮೃತ್ಯು, ಮತ್ತೋರ್ವ ಗಂಭೀರ..!

- Advertisement -
- Advertisement -

ರಂಜಾನ್​ ಹಿನ್ನೆಲೆಯಲ್ಲಿ ಬಟ್ಟೆ ವ್ಯಾಪಾರ ಮುಗಿಸಿಕೊಂಡು ವಾಪಸ್ ಆಗುವಾಗ ಸ್ವಿಫ್ಟ್​ ಹಾಗೂ ಸ್ಕಾರ್ಪಿಯೋ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿ ಶಹಬಾದ್ ತಾಲೂಕಿನ ಭಂಕೂರ ಗ್ರಾಮ ಬಳಿ ನಡೆದಿದೆ.

ಮೃತಪಟ್ಟವರನ್ನು ಉತ್ತರಪ್ರದೇಶ ಮೂಲದ ಜಾಹೀದ್ ಪಠಾಣ್ (30), ಶಾಕೀರ್ (20) ಎಂದು ಗುರುತಿಸಲಾಗಿದೆ.

ಸ್ವಿಫ್ಟ್ ಕಾರಿನಲ್ಲಿದ್ದ ಮೂವರು ಉತ್ತರಪ್ರದೇಶ ಮೂಲದ ಬಟ್ಟೆ ವ್ಯಾಪಾರಿಗಳಾಗಿದ್ದಾರೆ. ರಂಜಾನ್​ ಹಿನ್ನೆಲೆಯಲ್ಲಿ ಬಟ್ಟೆ ವ್ಯಾಪಾರ ಮುಗಿಸಿಕೊಂಡು ಕಲಬುರಗಿಯಿಂದ ಯಾದಗಿರಿಗೆ ಹೋಗುತ್ತಿದ್ದರು. ಈ ವೇಳೆ ಭಂಕೂರ ಗ್ರಾಮ ಬಳಿ ಬರುತ್ತಿದ್ದಂತೆ ಕಲಬುರಗಿ ಕಡೆಗೆ ತೆರಳುತ್ತಿದ್ದ ಸ್ಕಾರ್ಪಿಯೋ ಕಾರು ಮತ್ತು ಸ್ವಿಫ್ಟ್​ ಕಾರು ಮಧ್ಯೆ ಭೀಕರವಾದ ಅಪಘಾತ ಸಂಭವಿಸಿದೆ.

ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು ಇನ್ನೊಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸದ್ಯ ಈ ಸಂಬಂಧ ಶಹಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!