- Advertisement -
- Advertisement -




ದಾವಣಗೆರೆ: ಓಮ್ಮಿ ಕಾರು ಮತ್ತು ಕೆಎಸ್‌ಆರ್‌ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಓಮ್ಮಿಯಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ನ್ಯಾಮತಿ ತಾಲೂಕಿನ ಚಿನ್ನಕಟ್ಟೆ – ಶಿವಪುರ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.
ಮೃತಪಟ್ಟವರನ್ನು ಹರಬಗಟ್ಟದ ನಂಜುಂಡ(83), ಸೂರನಗೊಂಡಕೊಪ್ಪದ ದೇವರಾಜ್ (27) ಮತ್ತು ರಾಕೇಶ್ (30) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ 6ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.ಶಿಕಾರಿಪುರದ ಕಡೆಯಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮತ್ತು ಶಿವಮೊಗ್ಗದ ಕಡೆಯಿಂದ ಹೊರಟಿದ್ದ ಓಮ್ಮಿ ಮಧ್ಯೆ ಅಪಘಾತವಾಗಿದೆ. ಓಮ್ಮಿಯಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು ಆರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಈ ಪೈಕಿ ಚಿಂತಾಜನಕ ಸ್ಥಿತಿಯಲ್ಲಿದ್ದ ಇಬ್ಬರನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಣ್ಣಪುಟ್ಟ ಗಾಯಾಳುಗಳಿಗೆ ನ್ಯಾಮತಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








