- Advertisement -
- Advertisement -
ಮುಲ್ಕಿ : ದ್ವಿಚಕ್ರ ವಾಹನ ಮತ್ತು ಓಮ್ನಿ ಕಾರು ನಡುವೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರನೋರ್ವ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೊಲ್ನಾಡ್ ಬಳಿ ನಡೆದಿದೆ.
ಅಪಘಾತದಲ್ಲಿ ಕೊಲ್ನಾಡ್ ನಿವಾಸಿ ಮನೀಶ್(22) ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಮನೀಶ್ ಮಂಗಳೂರಿನ ಮಾಲ್ ವೊಂದರಲ್ಲಿರುವ ಮೊಬೈಲ್ ಶೋರೂಮ್ ನಲ್ಲಿ ಕೆಲಸ ಮಾಡುತ್ತಿದ್ದರು. ಮನೀಶ್ ಅವರು ಮನೆಯಿಂದ ತನ್ನ ದ್ವಿಚಕ್ರ ವಾಹನದಲ್ಲಿ ಕೊಲ್ನಾಡು ಬಸ್ ನಿಲ್ದಾಣದವರೆಗೆ ಬಂದು ಅಲ್ಲಿಂದ ಬಸ್ ನಲ್ಲಿ ಮಂಗಳೂರಿಗೆ ತೆರಳುತ್ತಿದ್ದರು,ಎಂದಿನಂತೆ ಇಂದು ಕೂಡ ಕೊಲ್ನಾಡು ಕಡೆಯಿಂದ ತನ್ನ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ವೇಳೆ ಈ ಅವಘಡ ನಡೆದಿದೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಗಾಯಗೊಂಡ ಅವರನ್ನು ಚಿಕಿತ್ಸೆಗಾಗಿ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -